ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಚುಟುಕು ಸಮರ ಇಂದು ನಾಗ್ಪುರದಲ್ಲಿ ಆರಂಭವಾಗಲಿದ್ದು, ಟೀಮ್ ಇಂಡಿಯಾದ ಅಂತಿಮ 11ರ ಬಳಗ ಹೇಗಿರಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಗಾಯ ಅಥವಾ ಇತರ ಕಾರಣಗಳಿಂದಾಗಿ ತಂಡದ ಪ್ರಮುಖ ಆಟಗಾರರಾದ ತಿಲಕ್ ವರ್ಮಾ ಮತ್ತು ಜಿತೇಶ್ ಶರ್ಮಾ ಈ ಸರಣಿಯಿಂದ ಹೊರಗುಳಿದಿದ್ದಾರೆ.
ಈ ಬದಲಾವಣೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ನಾಯಕ ಸೂರ್ಯಕುಮಾರ್ ಯಾದವ್, ತಂಡದ ಹೊಸ ರಣತಂತ್ರವನ್ನು ಬಿಚ್ಚಿಟ್ಟಿದ್ದಾರೆ.
ಎಡಗೈ ಬ್ಯಾಟರ್ ತಿಲಕ್ ವರ್ಮಾ ಅವರ ಸ್ಥಾನವನ್ನು ತುಂಬಲು ಇಶಾನ್ ಕಿಶನ್ ಸಜ್ಜಾಗಿದ್ದಾರೆ. ಟಿ20 ವಿಶ್ವಕಪ್ ತಂಡದ ಪ್ರಮುಖ ಸದಸ್ಯರಾಗಿರುವ ಕಿಶನ್, ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.
ಸ್ವತಃ ನಾಯಕ ಸೂರ್ಯಕುಮಾರ್ ಯಾದವ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಸೂರ್ಯ 4ನೇ ಕ್ರಮಾಂಕದಲ್ಲಿ ಆಡುವುದರಿಂದ, ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಅಂತಿಮ 11ರ ಬಳಗದಿಂದ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ.
5 ಮತ್ತು 6ನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಆಲ್ ರೌಂಡರ್ಗಳಾಗಿ ತಂಡಕ್ಕೆ ಆಸರೆಯಾಗಲಿದ್ದಾರೆ.
ಒಟ್ಟಾರೆಯಾಗಿ, ಇಂದಿನ ಪಂದ್ಯದಲ್ಲಿ ಯುವ ರಕ್ತ ಮತ್ತು ಅನುಭವಿ ಆಟಗಾರರ ಮಿಶ್ರಣದೊಂದಿಗೆ ನ್ಯೂಜಿಲೆಂಡ್ ತಂಡವನ್ನು ಎದುರಿಸಲು ಭಾರತ ಸಜ್ಜಾಗಿದೆ.


