ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ನಿವೇಶವನ್ನು ಅಕ್ರಮವಾಗಿ ಪಡೆದ ಪ್ರಕರಣದಲ್ಲಿ ಎ.1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಬುಧವಾರ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಲಿದ್ದಾರೆ.
ಮುಡಾ ಕೇಸ್ ಸಂಬಂಧ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜು ಸೇರಿದಂತೆ ಹಲವರ ವಿಚಾರಣೆ ನಡೆಸಿದ್ದಾರೆ.
ಪ್ರಕರಣದಲ್ಲಿ ಎ1 ಆಗಿರುವ ಸಿಎಂ ಸಿದ್ದರಾಮಯ್ಯಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕ್ಷಣಗಣನೆ ಶುರುವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ.
ಇಂದು ಸಿಎಂ ವಿಚಾರಣೆ ಹಿನ್ನೆಲೆ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಮೈಸೂರು ಸಿಟಿ ಕಮಿಷನರ್ ಸೀಮಾ ಲಾಟ್ಕರ್ ಮಂಗಳವಾರ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿ ನೂರಾರು ಬ್ಯಾರಿಕೇಡ್‌ಗಳನ್ನು ತರಿಸಿಕೊಂಡಿದ್ದಾರೆ.