ಹೊಸದಿಗಂತ ಡಿಜಿಟಲ್ ಡೆಸ್ಕ್:
ಗದಗ ಜಿಲ್ಲೆ ನರಗುಂದ ತಾಲೂಕಿನ ಬೈರನಹಟ್ಟಿಯಲ್ಲಿ ನಡೆದ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ದಂಪತಿಗಳು ಸಾವನ್ನಪ್ಪಿದ್ದಾರೆ. ಮೃತ ದಂಪತಿಯನ್ನು ಬಾಗಲಕೋಟೆ ಮೂಲದ ಸಿದ್ಧರಾಮ ಮತ್ತು ಹೇಮಾ ಎಂದು ಗುರುತಿಸಲಾಗಿದೆ.
ಮಕ್ಕಳಾದ ಮಲ್ಲಿಕಾರ್ಜುನ ಮತ್ತು ಸಹನಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರು ಮಕ್ಕಳನ್ನು ನರಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಟುಂಬ ಸಮೇತರಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಹಿಂತಿರುಗಿ ಕಾರಿನಲ್ಲಿ ಬಾಗಲಕೋಟೆ ಕಡೆಗೆ ಹೊರಟಿತ್ತು ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.
ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ನರಗುಂದ ಸಿಪಿಐ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.