ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆ ಕಡಿಮೆ ಆಗಿದ್ದು, ಬಿಸಿಲ ಅಬ್ಬರ ಹೆಚ್ಚಾಗಿದೆ. ಇಂದು ಸಹ ರಾಜ್ಯದ ಹಲವೆಡೆ ಬಿಸಿಲಿನ ಅಬ್ಬರ ಇರಲಿದೆ. ಇನ್ನೂ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.