ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಫ್ ವಿವಾದದ ಸುಳಿಯಲ್ಲಿ ಸಿಲುಕಿಕೊಂಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಅವರು ಸಂಡೂರು ಉಪಚುನಾವಣೆಯ ಚುನಾವಣಾ ಪ್ರಚಾರದಿಂದ ಸಹ ದೂರ ಉಳಿದಿದ್ದಾರೆ. ಇದರ ಮಧ್ಯ ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಹಣ ಹಂಚಿಕೆ ಆರೋಪದ ಮೇಲೆ ಅವರ ವಿರುದ್ಧ ಚುನಾವಣಾ ಅಧಿಕಾರಿಗಳು ಎನ್ ಸಿ ಆರ್ ದಾಖಲಿಸಿಕೊಂಡಿದ್ದಾರೆ.
ಚನ್ನಪಟ್ಟಣ ಮತದಾರರಿಗೆ ಹಣ ಹಂಚಿದ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.ಕೆಲವು ದಿನಗಳ ಹಿಂದೆ ಸಚಿವ ಜಮೀರ್ ಅಹ್ಮದ್ ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರ ಜಮೀರ್ ಅಹ್ಮದ್ ಪ್ರಚಾರ ಮಾಡಿದ್ದರು. ಈ ವೇಳೆ ಹಣ ಹಂಚಿದ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಎನ್ ಸಿ ಆರ್ ದಾಖಲಿಸಿಕೊಂಡಿದ್ದಾರೆ.