ಕರ್ನಾಟಕ ಸೇರಿ 9 ಕಡೆ ಎನ್‌ಐಎ ದಾಳಿ, ಮೊಬೈಲ್‌ ಬ್ಯಾಟರಿ ಸೇರಿ ಇನ್ನಿತರ ದಾಖಲೆ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೋಮವಾರ ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿ, ಶೋಧ ಕಾರ್ಯಾಚರಣೆ ನಡೆಸಿತು.

ಭಾರತವನ್ನು ಅಸ್ಥಿರಗೊಳಿಸುವ ಅಲ್​ಖೈದಾ ಉಗ್ರ ಸಂಘಟನೆಯ ಸಂಚಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ. ಜೊತೆಗೆ ಅಲ್ ಖೈದಾ ಉಗ್ರ ಸಂಘಟನೆ ಕುರಿತು ಪ್ರಚಾರ, ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ವ್ಯಕ್ತಿಗಳ ವಿರುದ್ದ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಆಸ್ಸಾಂನ 9 ಕಡೆ ದಾಳಿ ಮಾಡಲಾಗಿದೆ.

ಎನ್​ಐಎ ಅಧಿಕಾರಿಗಳು ಕಾರ್ಯಾಚಾರಣೆ ವೇಳೆ ಬ್ಯಾಂಕಿಂಗ್ ವಹಿವಾಟುಗಳು, ಮೊಬೈಲ್ ಫೋನ್, ಡಿಜಿಟಲ್ ಸಾಧನಗಳು ಮತ್ತು ಭಯೋತ್ಪಾದಕ ನಿಧಿ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!