January21, 2026
Wednesday, January 21, 2026
spot_img

ಶಾಲಾ ಆವರಣದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿ ಮೃತದೇಹ ಪತ್ತೆ

ಹೊಸದಿಗಂತ ವರದಿ ಯಾದಗಿರಿ:

ಜಿಲ್ಲೆಯ ವಡಿಗೇರಾ ಪಟ್ಟಣದಲ್ಲಿ ವಿದ್ಯಾರ್ಥಿಯೊಬ್ಬ ಅನುಮಾನಸ್ಪದ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ವಡಿಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಶಾಲೆಯ 9 ತರಗತಿ ಅಭ್ಯಾಸ ಮಾಡುತ್ತಿದ್ದ ಪವನ್ ತಂದೆ ಮಲ್ಲಪ್ಪ ( ಸುಮಾರು 14 ವರ್ಷ) ಬಾಲಕ ಅನುಮಾನಸ್ಪದ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ವಡಿಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Must Read