ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನನ್ನು ದೇವೇಗೌಡರು ಸೊಕ್ಕು ಮುರಿಯುತ್ತೇನೆ. ಗರ್ವಭಂಗ ಮಾಡುತ್ತೇನೆ ಎಂದು ಹೇಳಿದ್ದು ಸರಿಯೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಚನ್ನಪಟ್ಟಣ ಚುನಾವಣಾ ಪ್ರಚಾರದಲ್ಲಿ ಜಮೀರ್ ಅಹ್ಮದ್ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಈ ಉತ್ತರ ನೀಡಿದ್ದಾರೆ.
ಜಮೀರ್ ಮತ್ತು ಕುಮಾರಸ್ವಾಮಿ ಥಿಕ್ ಅಂಡ್ ಥಿನ್ ಫ್ರೆಂಡ್ಸ್. ಅವರವರ ನಡುವೆ ಏನೇನೋ ನಡೆಯುತ್ತಿರುತ್ತದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಜಮೀರ್ ಈಗಾಗಲೇ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಇದೆಲ್ಲವೂ ಉಪಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸಿಎಂ ತಿಳಿಸಿದರು.