ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು 5.2 ತೀವ್ರತೆಯ ಭೂಕಂಪ ಸಂಭವಿಸಿದೆ.
ಬುಧವಾರ ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆಯ ಭೂಕಂಪ ದಾಖಲಾಗಿದ್ದು, ಸದ್ಯ ಯಾವುದೇ ಜೀವಹಾನಿ ಅಥವಾ ಆಸ್ತಿ ಹಾನಿ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗ್ಗೆ 10:43ಕ್ಕೆ ಅಫ್ಘಾನಿಸ್ತಾನ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಕಾಶ್ಮೀರದ ಕಣಿವೆಯಲ್ಲಿ ಕಂಪನದ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಯಿಂದಾಚೆ ಓಡಿ ಬಂದಿದ್ದಾರೆ.