January21, 2026
Wednesday, January 21, 2026
spot_img

ನ್ಯೂಜಿಲೆಂಡ್ ವಿರುದ್ಧ ಟಿ20 ಮ್ಯಾಚ್: ಟೀಂ ಇಂಡಿಯಾ ಬ್ಯಾಟಿಂಗ್, ಇಶಾನ್ ಕಿಶನ್ ಗೆ ಚಾನ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಮೊದಲ ಟಿ20 ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡಲಿದೆ.

ಟಾಸ್ ಸೋತ ಬಳಿಕ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್ ನಾವು ಕೂಡ ಟಾಸ್ ಗೆದ್ದಿದ್ದರೆ ಮೊದಲು ಬ್ಯಾಟಿಂಗ್‌ ಮಾಡುತ್ತಿದ್ದೇವು. ಏಕೆಂದರೆ ಕಳೆದೆರಡು ದಿನಗಳಿಂದ ನಾವಿಲ್ಲಿ ಅಭ್ಯಾಸ ನಡೆಸಿದ್ದು, ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್‌ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗಲಿದೆ ಎಂದಿದ್ದಾರೆ.

ಕಳೆದ 14 ವರ್ಷಗಳಲ್ಲಿ ನ್ಯೂಜಿಲೆಂಡ್ ಭಾರತದಲ್ಲಿ ಭಾರತದ ವಿರುದ್ಧ ಟಿ20 ಸರಣಿಯನ್ನು ಗೆದ್ದಿಲ್ಲ. 2012 ರಲ್ಲಿ, ನ್ಯೂಜಿಲೆಂಡ್ ಭಾರತದ ವಿರುದ್ಧ ತವರಿನಲ್ಲಿ ತನ್ನ ಏಕೈಕ ಟಿ20 ಸರಣಿಯನ್ನು ಗೆದ್ದಿತು. ಆ ಸಮಯದಲ್ಲಿ ಭಾರತ 0-1 ಅಂತರದಲ್ಲಿ ಸರಣಿ ಸೋತಿತ್ತು.

ಉಭಯ ತಂಡಗಳು
ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.

ನ್ಯೂಜಿಲೆಂಡ್ ತಂಡ: ಟಿಮ್ ರಾಬಿನ್ಸನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕ್ರಿಸ್ಟಿಯನ್ ಕ್ಲಾರ್ಕ್, ಕೈಲ್ ಜೇಮಿಸನ್, ಇಶ್ ಸೋಧಿ ಮತ್ತು ಜಾಕೋಬ್ ಡಫಿ.

Must Read