ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮಾನತುಗೊಂಡಿರುವ ಪೊಲೀಸ್ ಮಹಾನಿರ್ದೇಶಕ (ನಾಗರಿಕ ಹಕ್ಕುಗಳ ಜಾರಿರ್ದೇಶನಾಲಯ) ಕೆ. ರಾಮಚಂದ್ರ ರಾವ್ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ತಮ್ಮ ಕಚೇರಿಯೊಳಗೆ ಸಮವಸ್ತ್ರದಲ್ಲಿದ್ದಾಗ ಅಶ್ಲೀಲ ಕೃತ್ಯಗಳಲ್ಲಿ ತೊಡಗಿರುವ ಆಡಿಯೋ ಮತ್ತು ವಿಡಿಯೋ ತುಣುಕುಗಳು ವೈರಲ್ ಆದ ನಂತರ ಡಿಜಿಪಿ ಕೆ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಲಾಗಿತ್ತು.
ಪೊಲೀಸ್ ಮಹಾನಿರ್ದೇಶಕ(ನೇಮಕಾತಿ) ಉಮೇಶ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.
ಸೋಮವಾರದ ಅಮಾನತು ಆದೇಶದಲ್ಲಿ, ರಾಜ್ಯ ಸರ್ಕಾರವು ರಾವ್ ಅಶ್ಲೀಲ ರೀತಿಯಲ್ಲಿ ವರ್ತಿಸಿದ್ದಾರೆ, ಇದು ಸರ್ಕಾರಿ ಸೇವಕನಿಗೆ ಯೋಗ್ಯವಲ್ಲ ಮತ್ತು ಸರ್ಕಾರಕ್ಕೆ ಮುಜುಗರವನ್ನುಂಟುಮಾಡುತ್ತದೆ ಎಂದು ಹೇಳಲಾಗಿದೆ.


