ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನದ ಜಯನಗರ ಸರ್ಕಲ್ ನಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಸಿಎಫ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ.
ಅರವಿಂದ್ (51) ಮೃತ ದುರ್ದೈವಿ. MFC ಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಹಾಸನ ಕಡೆಗೆ ಹೋಗುತ್ತಿದ್ದಾಗ ದ್ವಿಚಕ್ರ ವಾಹನಕ್ಕೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಅರವಿಂದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹಾಸನ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.