ಹೊಸದಿಗಂತ ವರದಿ ಯಾದಗಿರಿ:
ಈಜಲು ಹೋದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ನಡೆದಿದೆ.
ಶ್ರೇಯನ್ (8), ಯುವರಾಜ (9) ಮೃತ ಬಾಲಕರು. ರವಿವಾರ ಗ್ರಾಮದ ದೊಡ್ಡ ಹಳ್ಳದಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದು, ಬಾಲಕರ ಶೋಧಕ್ಕೆ ಸ್ಥಳೀಯ ಮೀನುಗಾರರು ಮುಂದಾಗಿದ್ದರು. ಸೋಮವಾರ ಇಬ್ಬರು ಬಾಲಕರ ಮೃತದೇಹಗಳು ಪತ್ತೆಯಾಗಿವೆ.
ಮಕ್ಕಳನ್ನು ಕಳೆದುಕೊಂಡ ಪಾಲಕರ ರೋಧನ ಮುಗಿಲು ಮುಟ್ಟಿತ್ತು. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.