ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಪ್ರಧಾನಿ ನರೇಂದ್ರ ಮೋದಿ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದು, ನಿಮ್ಮ ಪ್ರಧಾನಿಯ ಬಗ್ಗೆ ನನಗೆ ಅಪಾರ ಗೌರವವಿದೆ. ಅವರು ಅದ್ಭುತ ವ್ಯಕ್ತಿ ಮತ್ತು ನನ್ನ ಉತ್ತಮ ಸ್ನೇಹಿತ ಎಂದು ಹೇಳಿದ್ದಾರೆ.
ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ಭಾರತೀಯ ಮಾಧ್ಯಮದ ಮಾತನಾಡಿದ ಡೊನಾಲ್ಡ್ ಟ್ರಂಪ್, ಭಾರತದೊಂದಿಗೆ ಉತ್ತಮ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ಈ ಮೂಲಕ ಭಾರತ–ಅಮೆರಿಕ ಸಂಬಂಧಗಳಲ್ಲಿ ಇಬ್ಬರು ನಾಯಕರ ನಡುವಿನ ವೈಯಕ್ತಿಕ ನಂಟಿನ ಮಹತ್ವವನ್ನು ಎತ್ತಿ ತೋರಿಸಿದೆ.


