January22, 2026
Thursday, January 22, 2026
spot_img

ರಾಜ್ಯಪಾಲರು ಅಧಿವೇಶನಕ್ಕೆ ಬರ್ತಾರೆ, ಭಾಷಣ ಓದುತ್ತಾರೆ! ಎ.ಎಸ್.ಪೊನ್ನಣ್ಣ ವಿಶ್ವಾಸ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವೆ ಸೃಷ್ಟಿಯಾಗಿರುವ ಭಿನ್ನಾಭಿಪ್ರಾಯಗಳ ನಡುವೆಯೇ, ರಾಜ್ಯಪಾಲರು ವಿಶೇಷ ಅಧಿವೇಶನಕ್ಕೆ ಆಗಮಿಸಿ ಭಾಷಣ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭರವಸೆ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿ ರಾಜ್ಯಪಾಲರು ಸರ್ಕಾರದ ಅವಿಭಾಜ್ಯ ಅಂಗ. ಅವರು ತಮ್ಮ ಕರ್ತವ್ಯವನ್ನು ನಿಭಾಯಿಸುತ್ತಾರೆ ಎಂಬ ನಂಬಿಕೆ ನಮಗಿದೆ ಎಂದು ಹೇಳಿದರು.

ಭಾಷಣದ ಕೆಲವು ಅಂಶಗಳನ್ನು ತೆಗೆದುಹಾಕುವಂತೆ ರಾಜ್ಯಪಾಲರು ಸೂಚಿಸಿದ್ದರು. ಆದರೆ, ಇದು ಸಾಧ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

“ರಾಜ್ಯಪಾಲರು ಅಂದರೆ ಸ್ವತಂತ್ರ ವ್ಯಕ್ತಿಯಲ್ಲ, ಅವರು ಸರ್ಕಾರದ ಭಾಗ. ಸಂವಿಧಾನದ ಮೇಲೆ ವಿಶ್ವಾಸವಿದ್ದರೆ ಯಾವುದೇ ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವುದಿಲ್ಲ” ಎಂದು ಪೊನ್ನಣ್ಣ ಅಭಿಪ್ರಾಯಪಟ್ಟರು.

ಅಡ್ವೊಕೇಟ್ ಜನರಲ್ ಈಗಾಗಲೇ ದೆಹಲಿಯಲ್ಲಿದ್ದು, ಹಿರಿಯ ವಕೀಲರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಸರ್ಕಾರವು ಎಲ್ಲ ರೀತಿಯ ಕಾನೂನು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

Must Read