ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರದ ನರೇಗಾ ಯೋಜನೆಯ ಹೆಸರು ಬದಲಾವಣೆಯ ನಡೆಯನ್ನು ಖಂಡಿಸಿ, ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿಶೇಷ ಅಧಿವೇಶನವು ಇಂದಿನಿಂದ ಆರಂಭಗೊಂಡಿದೆ. ರಾಜಕೀಯ ಮೇಲಾಟಗಳ ನಡುವೆ ಈ ಅಧಿವೇಶನ ತೀವ್ರ ಕುತೂಹಲ ಕೆರಳಿಸಿದೆ.
ಆರಂಭದಲ್ಲಿ ಈ ವಿಶೇಷ ಅಧಿವೇಶನಕ್ಕೆ ಬರಲು ನಿರಾಕರಿಸಿದ್ದ ರಾಜ್ಯಪಾಲರು, ಈಗ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಸದನಕ್ಕೆ ಆಗಮಿಸಿ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಇದು ಆಡಳಿತ ಪಕ್ಷಕ್ಕೆ ಸಮಾಧಾನ ತಂದಿದ್ದರೂ, ರಾಜಭವನ ಮತ್ತು ಸರ್ಕಾರದ ನಡುವಿನ ಸಂಬಂಧದ ಕುರಿತು ಚರ್ಚೆಗೆ ದಾರಿ ಮಾಡಿಕೊಟ್ಟಿದೆ.
ಇತ್ತ ಸರ್ಕಾರದ ಆಕ್ಷೇಪ ಮತ್ತು ಅಧಿವೇಶನದ ಕಾರ್ಯಸೂಚಿಗೆ ತಿರುಗೇಟು ನೀಡಲು ವಿರೋಧ ಪಕ್ಷಗಳು ಸಂಪೂರ್ಣ ಸಿದ್ಧತೆ ನಡೆಸಿವೆ. ನರೇಗಾ ವಿಷಯದ ಜೊತೆಗೆ ಸರ್ಕಾರದ ವೈಫಲ್ಯಗಳನ್ನು ಸದನದಲ್ಲಿ ಎತ್ತಿ ಹಿಡಿಯಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ರಣತಂತ್ರ ರೂಪಿಸಿದೆ. ಒಟ್ಟಾರೆಯಾಗಿ, ಜನವರಿ 31ರವರೆಗಿನ ಈ ಅಧಿವೇಶನವು ರಾಜ್ಯ ರಾಜಕಾರಣದಲ್ಲಿ ಹೈ-ವೋಲ್ಟೇಜ್ ಕದನಕ್ಕೆ ವೇದಿಕೆಯಾಗಲಿದೆ.


