ಹೊಸದಿಗಂತ ಡಿಜಿಟಲ್ ಡೆಸ್ಕ್:
ಫೆಂಗಲ್ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ತಮಿಳುನಾಡು-ಪುದುಚೇರಿ ಕರಾವಳಿ ಸಮೀಪದಲ್ಲಿ ಗಂಟೆಗೆ 70-80 ಕಿಮೀ ವೇಗದಲ್ಲಿ ಗಂಟೆಗೆ 90 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಫೆಂಗಲ್ ಚಂಡಮಾರುತ ತೀವ್ರಗೊಳ್ಳುತ್ತಿದ್ದಂತೆ ಚೆನ್ನೈ ವಿಮಾನ ನಿಲ್ದಾಣ ಸ್ಥಗಿತಗೊಳಿಸಲಾಗಿದೆ. ರೈಲುಗಳು ತಡವಾಗಿದ್ದು, ಕೆಲವು ಮಾರ್ಗಗಳು ಬಂದ್ ಆಗಿವೆ.
ಈ ಹಿನ್ನೆಲೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶನಿವಾರ ಚೆನ್ನೈನ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ವ್ಯವಸ್ಥೆಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿದರು.
ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ನಗರದ ಹಲವೆಡೆ ಜಲಾವೃತವಾಗಿರುವ ಬಗ್ಗೆ ವರದಿಯಾಗಿದೆ.
ಚಂಡಮಾರುತವು ಭಾರೀ ಮಳೆ ಮತ್ತು 90 ಕಿಮೀ ವೇಗದಲ್ಲಿ ಬಲವಾದ ಗಾಳಿಯನ್ನು ತರುತ್ತದೆ ಎಂದು ನಿರೀಕ್ಷಿಸಲಾಗಿದೆ, ಇದು ರಾಜ್ಯದ ಹಲವಾರು ಭಾಗಗಳಲ್ಲಿ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲು ಮತ್ತು ಸಾರ್ವಜನಿಕ ಸೇವೆಗಳನ್ನು ಸ್ಥಗಿತಗೊಳಿಸಲು ಕಾರಣವಾಗಿದೆ.
ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು, ಕಾಂಚೀಪುರಂ, ವಿಲ್ಲುಪ್ಪುರಂ, ಕಲ್ಲಕುರಿಚಿ, ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಶನಿವಾರ ಅತಿ ಹೆಚ್ಚು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ರೆಡ್ ಅಲರ್ಟ್ ನೀಡಿದೆ.