ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮ ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಉತ್ತರ ಪ್ರದೇಶದ ಸಂಬಲ್ನಲ್ಲಿ ನಡೆದ ಹಿಂಸಾಚಾರ ಹಾಗೂ ಮಸೀದಿ ಸಮೀಕ್ಷೆ ಮತ್ತು ಬಾಂಗ್ಲಾದೇಶದಲ್ಲಿ ಹಿಂದು ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಎರಡು ಒಂದೇ ಎಂದು ಎಂದು ಹೇಳಿದ್ದಾರೆ.
ಸಂಭಾಲ್ ಮಸೀದಿ ಸಮೀಕ್ಷೆಯ ನಂತರ ನಡೆದ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯನ್ನು ದುರದೃಷ್ಟಕರ ಎಂದು ಕರೆದ ಮಫ್ತಿ, ದೇಶದಲ್ಲಿ ನಡೆಯುತ್ತಿರುವ ಮಸೀದಿ ಮತ್ತು ದೇವಾಲಯಗಳ ಮೇಲೆ ಇತ್ತೀಚಿನ ಹಕ್ಕುಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಸಮೀಕ್ಷೆಯ ನಂತರ ಗಂಟೆಗಳ ನಂತರ ಉಂಟಾದ ಘರ್ಷಣೆಯಲ್ಲಿ ನಾಲ್ಕು ಜನರು ಸಾವನ್ನಪ್ಪಿದರು ಮತ್ತು ಪೊಲೀಸರು ಮತ್ತು ಅಧಿಕಾರಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದರು. ಇನ್ನು ಘಟನೆಯನ್ನು 1947ರಲ್ಲಿದ್ದ ಪರಿಸ್ಥಿತಿಯತ್ತ ನಮ್ಮನ್ನು ಕೊಂಡೊಯ್ಯುತ್ತಿದೆಯೇನೋ ಎಂಬ ಭಯ ಕಾಡುತ್ತಿದೆ. ಯುವಕರು ಉದ್ಯೋಗದ ಮಾತುಗಳನ್ನಾಡಿದರೆ ಸಿಗುತ್ತಿಲ್ಲ. ನಮಗೆ ಒಳ್ಳೆಯ ಆಸ್ಪತ್ರೆ, ಶಿಕ್ಷಣ ಇಲ್ಲ. ಹಾಗೂ ಅವರು (ಬಿಜೆಪಿ) ರಸ್ತೆಗಳ ಸ್ಥಿತಿಯನ್ನು ಸುಧಾರಿಸುತ್ತಿಲ್ಲ ಆದರೆ ದೇವಸ್ಥಾನವನ್ನು ಹುಡುಕಲು ಮಸೀದಿಯನ್ನು ಕೆಡವಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಜಮ್ಮುವಿನಲ್ಲಿ ಕೆಲವರು ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದು, ಗುಂಡು ಹಾರಿಸಿರುವುದು ತುಂಬಾ ದುರದೃಷ್ಟಕರ ಎಂದರು.
ಭಾರತ ಮತ್ತು ಬಾಂಗ್ಲಾದೇಶದ ನಡುವಿನ ವ್ಯತ್ಯಾಸವೇನು?
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ಮಾತನಾಡಿ, ಬಾಂಗ್ಲಾದೇಶದಲ್ಲಿ, ಹಿಂದುಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ, ಭಾರತದಲ್ಲಿಯೂ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ನಡೆದರೆ, ಭಾರತ ಮತ್ತು ಬಾಂಗ್ಲಾದೇಶದ ನಡುವಿನ ವ್ಯತ್ಯಾಸವೇನು? ನನಗೆ ಬಾಂಗ್ಲಾ ಹಾಗೂ ಭಾರತದ ನಡುವೆ ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ ಎಂದರು.