ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿ ಈ ವಾರವೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮುಂದಿನ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಒಳನಾಡಿನ ಜಿಲ್ಲೆಗಳಿಗೂ ಸಾಧಾರಣ ಮಳೆಯಾಗುವ ಸಂಭವವಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆ ಹೊರತುಪಡಿಸಿ ಉಳಿದಂತೆ ಯಾವುದೇ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಿಲ್ಲ.
ಗುರುವಾರದಿಂದ ಫೆಂಗಲ್ ಚಂಡಮಾರುತದ ಎಫೆಕ್ಟ್ ತಗ್ಗಲಿದೆ. ಈ ಹಿನ್ನೆಲೆ ಯಾವುದೇ ಜಿಲ್ಲೆಗಳಿಗೆ ಮಳೆ ಅಲರ್ಟ್ ನೀಡಿಲ್ಲ. ಈ ವಾರ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಕೆಲ ಪ್ರದೇಶದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಅಲ್ಲದೇ ರಾಜ್ಯದೆಲ್ಲೆಡೆ ಚಳಿಯ ವಾತಾವರಣ ಮುಂದುವರಿಯುತ್ತದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.