ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಕೇಸ್ನಲ್ಲಿ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಅಕ್ರಮದ ಬಗ್ಗೆ ಇಡಿ ಲೋಕಾಯುಕ್ತಗೆ ಪತ್ರ ಬರೆದಿರೋ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಮುಡಾ ಕೇಸ್ನಲ್ಲಿ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಇಡಿ ಪತ್ರಕ್ಕೂ ಕೇಂದ್ರ ಸರ್ಕಾರಕ್ಕೂ ಏನ್ ಸಂಬಂಧ? ಮುಡಾ ಹಗರಣದ ಬಗ್ಗೆ ಹೈಕೋರ್ಟ್ನಲ್ಲಿ ತನಿಖೆಗೆ ಆದೇಶ ಆಗಿದೆ. ಇಡಿಯವರಿಗೆ ಕೇಂದ್ರ ಸರ್ಕಾರ ಸೂಚನೆ ಕೊಟ್ಟಿಲ್ಲ. ಮುಡಾ ಕೇಸ್ನಲ್ಲಿ ರಾಜ್ಯಪಾಲರಿಗೆ ದೂರು ನೀಡಿರೋರೆ ಇಡಿಗೂ ದೂರು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.