ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ತೀವ್ರತೆ ಕಡಿಮೆಯಾಗಿದ್ದರೂ, ಮುಂದಿನ ಐದು ದಿನಗಳಲ್ಲಿ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಡಿಸೆಂಬರ್ 12 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.