ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿ ಕೇಂದ್ರ ಕಾರಾಗೃಹವನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸಿದ್ದ ಶಂಕಿತ ಉಗ್ರ ಜುಲ್ಫಿಕರ್ ಸೇರಿದಂತೆ ಆರು ಕೈದಿಗಳನ್ನು ಜೈಲು ಅಧಿಕಾರಿಗಳು ವರ್ಗಾವಣೆ ಮಾಡಿದ್ದಾರೆ.
ಕೈದಿಗಳನ್ನು ರಾಜ್ಯದ ವಿವಿಧ ಜೈಲಿಗೆ ವರ್ಗಾಯಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಜುಲ್ಫಿಕರ್ 2013ರಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಬಾಂಬ್ ಸ್ಫೋಟದ ಆರೋಪಿಯಾಗಿದ್ದಾನೆ. ಶಿವಮೊಗ್ಗದ ರೌಡಿಶೀಟರ್ ಬಚ್ಚನ್ ಸೇರಿದಂತೆ ಆರು ಮಂದಿಯನ್ನು ವರ್ಗಾವಣೆ ಮಾಡಲು ಪೊಲೀಸರು ಪ್ಲಾನ್ ಮಾಡಿದ್ದಾರೆ.
ಆರೋಪಿಗಳು ಕಲಬುರಗಿ ಸೆಂಟ್ರಲ್ ಜೈಲಿನ ವಾತವರಣವನ್ನೆ ಹಾಳು ಮಾಡಿದ್ದರು. ಜೈಲು ಅಧಿಕಾರಿಗಳ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‍ಮೇಲ್ ಮಾಡಿ ಹೈಫೈ ಜೀವನ ನಡೆಸುತ್ತಿದ್ದರು.