ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದು ಅವರ ತಂದೆ ಬಿಎಸ್ ಯಡಿಯೂರಪ್ಪನವರಿಂದಾಗಿ ಎಂದು ರಮೇಶ್ ಜಾರಕಿಹೊಳಿ ಕಾಮೆಂಟ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಅವರ ಹೇಳಿಕೆಗಳಿಗೆಲ್ಲ ನಾನು ಉತ್ತರ ನೀಡಲ್ಲ, ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡಿದ್ದು ಪಕ್ಷದ ವರಿಷ್ಠರೇ ಹೊರತು ನಾನಲ್ಲ ಎಂದರು.
ರಾಜ್ಯಾದ್ಯಂತ ಜನರು ಅವರಿಗೆ ಬೆಂಬಲ ಸೂಚಿಸಿದರು. ಹಿಂದಿನ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನ ಹೇಗೆ ಬೆಂಬಲಿಸಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.