ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ಲಾಮಿಕ್ ಬಂಡುಕೋರರು ಹಾಗೂ ಸಿರಿಯಾ ಸರ್ಕಾರದ ವಿರುದ್ಧದ ಅಂತರ್ಯುದ್ಧ ತಾರಕಕ್ಕೇರಿದ್ದು, ಇದರ ಪರಿಣಾಮ ಸಿರಿಯಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಇದೀಗ ಸಿರಿಯಾದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ವಿದೇಶಾಂಗ ಸಚಿವಾಲಯ ಡಿಸೆಂಬರ್ 6ರ ಮಧ್ಯರಾತ್ರಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸಿರಿಯಾಗೆ ಅಥವಾ ಸಿರಿಯಾ ಮೂಲಕ ಯಾರೂ ಪ್ರಯಾಣಿಸಬೇಡಿ ಎಂದು ಎಚ್ಚರಿಸಿದೆ. ಜೊತೆಗೆ ಸಿರಿಯಾಲ್ಲಿರುವ ಭಾರತೀಯ ನಾಗರೀಕರು ಈ ತಕ್ಷಣವೇ ಹೊರಟುಬರಲು ಸೂಚಿಸಿದೆ. ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ತಕ್ಷಣವೆ ಹೊರಟು ಬರಲು ಸೂಚನೆ ನೀಡಿದೆ.
ಸಿರಿಯಾದಲ್ಲಿನ ಪರಿಸ್ಥಿತಿ ಹದಗೆಡುತ್ತಿದ್ದು, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಆದೇಶದವರೆಗೂ ಭಾರತೀಯ ಪ್ರಜೆಗಳು ಸಿರಿಯಾ ಭೇಟಿಯನ್ನು ನಿಯಂತ್ರಿಸಬೇಕು. ಪ್ರಸ್ತುತ ಸಿರಿಯಾದಲ್ಲಿರುವ ಭಾರತೀಯ ಪ್ರಜೆಗಳು ಡಮಾಸ್ಕಸ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಿ. ಭಾರತೀಯ ಪ್ರಜೆಗಳಿಗೆ ತುರ್ತು ಸಹಾಯವಾಣಿ ಸಂಖ್ಯೆ +963 993385973 ಹಾಗೂ [email protected] ಇಮೇಲ್ ಐಡಿ ಮೂಲಕ ಸಂಪರ್ಕಿಸುವಂತೆ ತಿಳಿಸಿವೆ.
ಜೊತೆಗೆ ಈ ತಕ್ಷಣಕ್ಕೆ ಹೊರಡಲು ಸಾಧ್ಯವಾಗುವ ಭಾರತೀಯರಿಗೆ ವಾಣಿಜ್ಯ ವಿಮಾನಗಳು ಲಭ್ಯವಿದೆ. ಈ ವಿಮಾನದ ಮೂಲಕ ಭಾರತಕ್ಕೆ ವಾಪಾಸ್ ಆಗುವಂತೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.