ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬಣ ಕಲಹದ ನಡುವೆಯೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿಯಾಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನೇಕೆ ಮುಖ್ಯಮಂತ್ರಿ ಆಗಬಾರದು? ನನ್ನಲ್ಲಿ ಏನು ಕೊರತೆ ಇದೆ? ಪ್ರಾಮಾಣಿಕ ಸಿಎಂ ಆಗಬೇಕಾದರೆ ಮೊದಲು ನನ್ನ ಹೆಸರೇ ಬರುತ್ತದೆ. ದೇವರು ಒಳ್ಳೆ ವ್ಯಕ್ತಿಗೆ ಸಿಎಂ ಆಗುವಂತೆ ಅಪ್ಪಣೆ ನೀಡಿದರೆ ನಾನೇ ಸಿಎಂ ಆಗುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ.
ಭ್ರಷ್ಟಾಚಾರ ಅಥವಾ ಏನಾದರೂ ಹಗರಣ ಇದ್ದಿದ್ದರೆ ನನ್ನನ್ನ ಬಿಡ್ತಿದ್ರಾ? ಈ ಹಿಂದೆ ನನ್ನ ಮೇಲೂ ದಾಳಿ ಮಾಡಿಸಿದ್ದಾರೆ, ಗುಪ್ತಚರ ಇಲಾಖೆಯನ್ನೂ ಬಿಟ್ಟಿದ್ದರು. ಎಲ್ಲವನ್ನೂ ನೋಡಿದ್ರೂ ಏನೂ ಆಗಲಿಲ್ಲ. ಅದಕ್ಕೆ ಸುಮ್ಮನೆ ಕೂತಿದ್ದಾರೆ ಅಷ್ಟೇ. ನನ್ನ ಮೇಲೆ ಆ ಭಗವಂತನ ಕೃಪೆ ಇದೆ, ಜನರ ಶಕ್ತಿ ಇದೆ ಎಂದು ಹೇಳಿದರು.