ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯೊಳಗಿನ ಗುಂಪುಗಾರಿಕೆ ಕೊನೆಗಾಣಿಸಲು ಭಾರತೀಯ ಜನತಾ ಪಕ್ಷದ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ಬೆಂಗಳೂರಿಗೆ ಆಗಮಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶೋಕಾಸ್ ನೀಡಿದ್ದು ಅದಕ್ಕೆ ಉತ್ತರ ನೀಡಿದ ಬಳಿಕ ಮುಂದಿನ ಕ್ರಮವನ್ನು ಹೈಕಮಾಂಡ್ ನಿರ್ಧರಿಸಲಿದೆ. ಆದರೆ, ಯತ್ನಾಳ್ ಈಗಾಗಲೇ ದೆಹಲಿಗೆ ತೆರಳಿ ಪಕ್ಷದ ಶಿಸ್ತು ಸಮಿತಿ ಮುಂದೆ ಹಾಜರಾಗಿ ವರಿಷ್ಠರನ್ನೂ ಭೇಟಿ ಮಾಡಿದ್ದಾರೆ ಎಂದು ಹೇಳಿದ್ದಾರೆ.