ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿರುವ ಪ್ರಕರಣ ಕರ್ನಾಟಕದಲ್ಲಿ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ ಬೆಳಗಾವಿಯ ವಿವಿಧ ಆಸ್ಪತ್ರೆಗಳಲ್ಲಿ ಆರು ತಿಂಗಳಲ್ಲಿ 29 ಬಾಣಂತಿಯರು ಮತ್ತು 322 ಶಿಶುಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ.
ಏಪ್ರಿಲ್ ನಿಂದ ಅಕ್ಟೋಬರ್ 2024 ರವರೆಗೆ, ಈ ಪ್ರದೇಶದಲ್ಲಿ 29 ಬಾಣಂತಿಯರು ಸಾವನ್ನಪ್ಪಿದ್ದಾರೆ. ಡಿಎಚ್ ಒ ಮುಖ್ಯಾಧಿಕಾರಿ ಶರಣಪ್ಪ ಗಡೇದ ಮಾತನಾಡಿ, ಸಕಾಲದಲ್ಲಿ ಚಿಕಿತ್ಸೆ ದೊರೆಯದಿರುವುದು, ರಕ್ತಸ್ರಾವ, ವೈದ್ಯಕೀಯ ನಿರ್ಲಕ್ಷ್ಯ ಸೇರಿದಂತೆ ಹಲವು ಕಾರಣಗಳಿಂದ ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಆರು ತಿಂಗಳಲ್ಲಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ 322 ಶಿಶುಗಳು ಸಾವನ್ನಪ್ಪಿದ್ದು, ಜಿಲ್ಲಾ ಆಸ್ಪತ್ರೆಯೊಂದರಲ್ಲೇ 172 ಮಕ್ಕಳು ಸಾವನ್ನಪ್ಪಿದ್ದಾರೆ. ಪ್ರತಿ ತಿಂಗಳು ಸರಾಸರಿ 45 ರಿಂದ 52 ಶಿಶುಗಳು ಮರಣ ಹೊಂದಿವೆ ಎನ್ನಲಾಗಿದೆ.
ಬಿಮ್ಸ್ ಆಸ್ಪತ್ರೆ ಅಧೀಕ್ಷಕ ಡಾ.ವಿಠ್ಠಲ್ ಶಿಂಧೆ ಮತ್ತು ಡಿಎಚ್ಒ ಶರಣಪ್ಪ ಗಡೇದ ಮಾತನಾಡಿ, ಶಿಶುಗಳು ಕಡಿಮೆ ತೂಕ, ಬೆಳವಣಿಗೆಯ ಕೊರತೆ, ಸಕಾಲಿಕ ಚಿಕಿತ್ಸೆ ಕೊರತೆ, ನ್ಯುಮೋನಿಯಾ, ಉಸಿರುಗಟ್ಟುವಿಕೆ ಮತ್ತು ಅಪೌಷ್ಟಿಕತೆಯಿಂದ ಸಾವನ್ನಪ್ಪಿವೆ ಎಂದು ತಿಳಿಸಿದ್ದಾರೆ.