ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ನ ಹಾಸನದ ಬೃಹತ್ ಸಮಾವೇಶಕ್ಕೆ ಪ್ರತಿಯಾಗಿ ಜೆಡಿಎಸ್ನಿಂದ ನಡೆಯಬೇಕಿದ್ದ ಸಮಾವೇಶ ಮುಂದೂಡಿಕೆಯಾಗಿದೆ.
ಹಾಸನದಲ್ಲಿ ಕಾಂಗ್ರೆಸ್ ನಡೆಸಿದ್ದ ಜನಕಲ್ಯಾಣ ಸಮಾವೇಶಕ್ಕೆ ಕೌಂಟರ್ ಕೊಡಲು ಜೆಡಿಎಸ್, ಕೇಂದ್ರ ಸಚಿವ ಕುಮಾರಸ್ವಾಮಿಗೆ ಅಭಿನಂದನೆ ಹೆಸರಿನಲ್ಲಿ ಬಹತ್ ಸಮಾವೇಶ ಮಾಡಲು ಮುಂದಾಗಿದ್ದು, ಇದೇ ಇದೇ ಡಿಸೆಂಬರ್ 15ರಂದು ಮಂಡ್ಯದಲ್ಲಿ ನಡೆಯಬೇಕಿದ್ದ ಬೃಹತ್ ಸಮಾವೇಶವನ್ನು ಮುಂದೂಡಿಕೆಯಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಜೆಡಿಎಸ್ ಸಮಾವೇಶ ಮುಂಡೂಡಿಕೆ ಮಾಡಲಾಗಿದೆ ಎಂದು ಸ್ವತಃ ಮಾಜಿ ಸಚಿವ ಪುಟ್ಟರಾಜು ಮಾಹಿತಿ ನೀಡಿದ್ದಾರೆ.
ಇಂದು ಮದ್ದೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುಟ್ಟಸ್ವಾಮಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಇದೇ ಡಿಸೆಂಬರ್ 15ರಂದು ಕುಮಾರಸ್ವಾಮಿ ಅಭಿನಂದನಾ ಸಮಾರಂಭ ಮುಂದೂಡಿಕೆ ಮಾಡಲಾಗಿದೆ. ಕುಮಾರಸ್ವಾಮಿಯವರ ಸೂಚನೆ ಮೇರೆಗೆ ಮುಂದೂಡಿದ್ದೇವೆ. ಸಮಾರಂಭ ಮುಂದೂಡಿಕೆಗೆ ಬೇರೆ ಯಾವುದೇ ಕಾರಣ ಇಲ್ಲ. ಯಾವುದೇ ಗೊಂದಲ ಆಗಬಾರದೆಂದು ಮುಂದೂಡಿದ್ದೇವೆ. ಸಮ್ಮೇಳನ ಮುಗಿದ ಮೇಲೆ ದಿನಾಂಕ ನಿಗದಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.