ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಿರುವ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ವಿರೋಧಿಸಿ ಸಂಭಾಜಿ ವೃತ್ತಕ್ಕೆ ಬಂದ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಎಂಇಎಸ್ ಮಹಾಮೇಳ ಆಯೋಜಿಸದಂತೆ ಪೊಲೀಸರು ಭಾರಿ ಭದ್ರತೆ ಏರ್ಪಡಿಸಿದ್ದರು. ಮೊದಲಿಗೆ, ಎಂಇಎಸ್‌ನ ಕಾರ್ಯಾಧ್ಯಕ್ಷ ಮನೋಹರ್ ಕಿಣೇಕರ್ ಮತ್ತು ಖಜಾಂಚಿ ಪ್ರಕಾಶ ಮಾರ್ಗಲೆ ಸೇರಿದಂತೆ ಕಾರ್ಯಕರ್ತರನ್ನು ರಾಮಲಿಂಗಖಿಂಡ್ ಗಲ್ಲಿಯಲ್ಲಿರುವ ಕಚೇರಿಯಿಂದ ಬಂಧಿಸಲಾಯಿತು.
ನಂತರ ಮಹಾರಾಷ್ಟ್ರ ಪರ ಘೋಷಣೆಗಳನ್ನು ಕೂಗುತ್ತಾ ಗುಂಪು ಗುಂಪಾಗಿ ಆಗಮಿಸಿದ ಕಾರ್ಯಕರ್ತರನ್ನು ಸಂಭಾಜಿ ವೃತ್ತದಲ್ಲಿ ಪೊಲೀಸರು ವಶಕ್ಕೆ ಪಡೆದರು. ಸಂಭಾಜಿ ವೃತ್ತದಲ್ಲಿ ಎಂಇಎಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಬಂದಿದ್ದರಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.