ಇಂದು ಸಂಜೆ ಹುಟ್ಟೂರಿನಲ್ಲಿ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯ ಕಾಫಿ ಡೇ ಬಳಿಯ ಖಾಲಿ ಜಾಗದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಕಾಫಿ ಡೇ ಮಾಲೀಕ ಸಿದ್ಧಾರ್ಥ ಪುತ್ರ ಹಾಗೂ ಎಸ್.ಎಂ. ಕೃಷ್ಣ ಅವರ ಮೊಮ್ಮಗ ಅನರ್ಥ್ಯ ಹೆಗಡೆ ಚಿತೆಗೆ ಅಗ್ನಿಸ್ಪರ್ಶ ಮಾಡಲಿದ್ದಾರೆ.

ವೇದ ಬ್ರಹ್ಮ ಭಾನುಪ್ರಕಾಶ್ ಶರ್ಮಾ ನೇತೃತ್ವದ 15 ವೈದಿಕರ ತಂಡವು ಧಾರ್ಮಿಕ ವಿಧಿಗಳನ್ನು ನಡೆಸುತ್ತದೆ. ಅನೇಕ ಯತಿಗಳು, ವಿವಿಧ ಮಠಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಅಂತ್ಯಕ್ರಿಯೆಯನ್ನು ನಡೆಸಲಾಗುತ್ತದೆ.

ಬೆಂಗಳೂರಿನಿಂದ ಪಾರ್ಥಿವ ಶರೀರ ತರಬೇಕಿದ್ದು, ಸಾರ್ವಜನಿಕ ದರ್ಶನದ ನಂತರ ಅಂತ್ಯಕ್ರಿಯೆ ವಿಧಿ ವಿಧಾನ ಆರಂಭವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!