ಹೊಸದಿಗಂತ ವರದಿ,ಹುಬ್ಬಳ್ಳಿ:
ಅಕ್ರಮವಾಗಿ ಪಡಿತರ ಫಲಾನುಭವಿಗಳಿಗೆ ಸೇರಿ ೩೦೦ ಕ್ಕೂ ಹೆಚ್ಚು ಅಕ್ಕಿಯ ಚೀಲಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹುಬ್ಬಳ್ಳಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಾವೇರಿಯಿಂದ ಮಹಾರಾಷ್ಟ್ರದ ಕರಾಳ ಎಂಬ ಜಾಗಕ್ಕೆ ಸಾಗಟ ಮಾಡುತ್ತಿದ್ದರು. ಆಗ ಖಚಿತ ಮಾಹಿತಿ ಬಂದ ಹಿನ್ನೆಲೆ ನಗರದ ಹೊರವಲಯದಲ್ಲಿ ಅಕ್ಕಿ ಚೀಲಗಳ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ ತಿಳಿಸಿದರು.
ಲಾರಿ ಚಾಲಕನನ್ನು ವಶಕ್ಕೆ ಪಡೆದಯಲಾಗಿದ್ದು, ಆಹಾರ ನಾಗರಿಕ ಸರಬರಾಜು ಇಲಾಖೆಗೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತದೆ ಎಂದರು.


