May 24, 2026
Sunday, May 24, 2026
spot_img

ಎಸ್‌ಐಆರ್ ಯಿಂದ ಬಂಗಾಳದಲ್ಲಿ ಪ್ರತಿದಿನ ಮೂರರಿಂದ ನಾಲ್ವರು ಆತ್ಮಹತ್ಯೆ: ಮಮತಾ ಬ್ಯಾನರ್ಜಿ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆ ಆತಂಕದಿಂದಾಗಿ ರಾಜ್ಯದಲ್ಲಿ ಪ್ರತಿದಿನ ಮೂರರಿಂದ ನಾಲ್ಕು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಹೇಳಿದ್ದಾರೆ.

ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಇಲ್ಲಿನ ರೆಡ್ ರೋಡ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರವು ಈ ಸಾವುಗಳಿಗೆ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಪ್ರತಿಪಾದಿಸಿದರು.

110ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ; ಪ್ರತಿದಿನ ಮೂರರಿಂದ ನಾಲ್ಕು ಜನರು SIR ಆತಂಕದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಅವರು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !