ನನ್ನ ಮೇಲಿನ ಕೇಸ್‌ ರದ್ದು ಮಾಡಿ: ಹೈಕೋರ್ಟ್‌ ಮೊರೆ ಹೋದ ಅಲ್ಲು ಅರ್ಜುನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಟ ಅಲ್ಲು ಅರ್ಜುನ್‌ ನಟನೆಯ ಪುಷ್ಪಾ-2 ರಿಲೀಸ್‌ ಆಗಿದ್ದು, ಥಿಯೇಟರ್‌ಗಳು ಈಗಲೂ ಹೌಸ್‌ಫುಲ್‌ ಆಗಿವೆ. ಮೊದಲ ದಿನದ ಶೋನಲ್ಲಿ ಅತಿಯಾದ ಜನಸ್ತೋಮದಿಂದಾಗಿ ಕಾಲ್ತುಳಿತ ಉಂಟಾಗಿತ್ತು. ಇದರಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಮಗನಿಗೆ ಗಾಯಗಳಾಗಿತ್ತು.

ಸಂಧ್ಯಾ ಥಿಯೇಟರ್ ಘಟನೆಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಅಲ್ಲು ಅರ್ಜುನ್ ಅರ್ಜಿ ಸಲ್ಲಿಸಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ವಜಾಗೊಳಿಸುವಂತೆ ಅವರು ಕೋರಿದ್ದಾರೆ. ಈ ಬಗ್ಗೆ ಕೋರ್ಟ್ ಯಾವ ರೀತಿಯ ಆದೇಶ ಹೊರಡಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಅಲ್ಲು ಅರ್ಜುನ್ ಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಅಲ್ಲು ಅರ್ಜುನ್ ಅರ್ಜಿಯಲ್ಲಿ ಕೋರಿದ್ದಾರೆ. ಶೀಘ್ರವೇ ಈ ಅರ್ಜಿ ವಿಚಾರಣೆಗೆ ಬರಲಿದೆ. ಸದ್ಯ, ಸಂತ್ರಸ್ತ ಕುಟುಂಬಕ್ಕೆ ಇವರು 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಡಿಸೆಂಬರ್ 4ರಂದು ದುರ್ಘಟನೆ ನಡೆಯಿತು. ‘ಪುಷ್ಪ 2’ ಚಿತ್ರದ ಪ್ರೀಮಿಯರ್ ಶೋ ಹೈದರಾಬಾದ್​ನ ಸಂಧ್ಯಾ ಥಿಯೇಟರ್​ನಲ್ಲಿ ನಡೆಯಿತು. ಈ ವೇಳೆ ಅಲ್ಲು ಅರ್ಜುನ್ ಕೂಡ ಬಂದಿದ್ದರು. ಥಿಯೇಟರ್​ನಲ್ಲಿ ನೂಕುನುಗ್ಗಲು ಉಂಟಾಗಿತ್ತು. ಈ ವೇಳೆ ಉಂಟಾದ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಕಾಲ್ತುಳಿತ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಕೂಡ ಪೊಲೀಸರು ಆರೋಪಿಯನ್ನಾಗಿ ಸೇರಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!