ತಬಲಾ ಮಾಂತ್ರಿಕನನ್ನು ಅರಸಿ ಬಂದಿತ್ತು ಹತ್ತು ಹಲವು ಪ್ರಶಸ್ತಿಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಸಂಗೀತ ಲೋಕದಲ್ಲಿ ಅಪಾರ ಹೆಸರು ಮಾಡಿದ ತಬಲಾ ಮಾಂತ್ರಿಕ ಉಸ್ತಾದ್ ಜಾಕೀರ್ ಹುಸೇನ್‌ ಇಂದು ಚಿಕಿತ್ಸೆ ಫಲಕಾರಿಯಾಗದೆ (73) ಕೊನೆಯುಸಿರೆಳೆದಿದ್ದಾರೆ.

ಜಾಕಿರ್ ಹುಸೇನ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

ಉಸ್ತಾದ್ ಜಾಕೀರ್ ಹುಸೇನ್ 1951 ರಲ್ಲಿ ಮುಂಬೈನಲ್ಲಿ ಜನಿಸಿದರು. ಇನ್ನು ಇವರನ್ನು ವಿಶ್ವದ ಶ್ರೇಷ್ಠ ತಬಲಾವಾದಕರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಭಾರತೀಯ ಶಾಸ್ತ್ರೀಯ ಸಂಗೀತಕ್ಕೆ ಜಾಕೀರ್‌ ಹುಸೇನ್‌ ಕೊಡುಗೆ ಅಪಾರ. ಅಸಾಧಾರಣ ಪ್ರತಿಭೆಯಿಂದಾಗಿ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಖ್ಯಾತ ತಬಲಾ ವಾದಕ ಅಲ್ಲಾ ರಾಖಾ ಅವರ ಹಿರಿಯ ಪುತ್ರ ಜಾಕೀರ್ ಹುಸೇನ್ ತಮ್ಮ ತಂದೆಯ ಹೆಜ್ಜೆಗಳನ್ನು ಅನುಸರಿಸಿ ಜಾಗತಿಕ ಐಕಾನ್ ಆಗಿ ಬದಲಾಗಿದ್ದಾರೆ. ತಮ್ಮ ವೃತ್ತಿ ಜೀವನದುದ್ದಕ್ಕೂ ಜಾಕಿರ್‌ ಹುಸೇನ್ 5 ಗ್ರ್ಯಾಮಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಹಿಂದೂಸ್ಥಾನಿ, ಶಾಸ್ತ್ರೀಯ ಸಂಗೀತ ಮತ್ತು ಜಾಝ್‌ ಫ್ಯೂಷನ್‌ ಅನ್ನು ಅಭ್ಯಾಸ ಮಾಡಿದ್ದಾರೆ. ಕಳೆದ 60 ವರ್ಷಗಳಲ್ಲಿ ವಿಶ್ವದಾದ್ಯಂತ ಸಾವಿರಾರು ಸಂಗೀತ ಕಛೇರಿಗಳನ್ನು ನೀಡಿದ್ದಾರೆ. ತಮ್ಮದೇ ಅಭಿಮಾನಿಗಳನ್ನು ಹೊಂದಿರುವ ಅವರು ನೂರಾರು ಶಿಷ್ಯರನ್ನು ಹುಟ್ಟು ಹಾಕಿ ಸಂಗೀತ ಲೋಕಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಸಂಗೀತ ಕ್ಷೇತ್ರದಲ್ಲಿನ ಇವರ ಅಸಾಧಾರಣ ಸಾಧನೆಗೆ ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳೂ ಸಂದಿವೆ.ಜಾಕೀರ್ ಹುಸೇನ್ ಅವರಿಗೆ 1999 ರಲ್ಲಿ US ನ್ಯಾಷನಲ್ ಎಂಡೋಮೆಂಟ್ ಫಾರ್ ದಿ ಆರ್ಟ್ಸ್‌ನಿಂದ ನ್ಯಾಷನಲ್ ಹೆರಿಟೇಜ್ ಫೆಲೋಶಿಪ್ ಅವಾರ್ಡ್‌‌ ನೀಡಲಾಯಿತು. ಭಾರತೀಯ ಶಾಸ್ತ್ರೀಯ ಸಂಗೀತದ ಜಾಗತಿಕ ರಾಯಭಾರಿಯಾಗಿಯೂ ಇವರು ಗುರುತಿಸಿಕೊಂಡಿದ್ದರು.

ಇಂಗ್ಲಿಷ್ ಗಿಟಾರ್ ವಾದಕ ಜಾನ್ ಮೆಕ್ ಲಾಗ್ಲಿನ್, ಪಿಟೀಲು ವಾದಕ ಎಲ್.ಶಂಕರ್ ಮತ್ತು ತಾಳವಾದ್ಯಗಾರ ಟಿ.ಎಚ್.’ವಿಕ್ಕು’ ವಿನಾಯಕರಾಮ್ ಅವರೊಂದಿಗೆ 1973ರಲ್ಲಿ ನಡೆಸಿಕೊಟ್ಟ ವಿಶಿಷ್ಟ ಯೋಜನೆ ಅದ್ಭುತವಾಗಿತ್ತು. ಭಾರತೀಯ ಶಾಸ್ತ್ರೀಯ ಸಂಗೀತವನ್ನು ಜಾಝ್‌ನೊಂದಿಗೆ ಸಂಯೋಜಿಸಿದ ಈ ವಿಶಿಷ್ಟ ಪ್ರಯೋಗ ಜನಪ್ರಿಯವಾಗಿತ್ತು. ತಬಲಾ ವಾನದ ಜತೆಗೆ ಸಂಗೀತ ನಿರ್ದೇಶನ, ನಟನಾ ಕ್ಷೇತ್ರದಲ್ಲಿಯೂ ಅವರು ತೊಡಗಿಸಿಕೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!