ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೆಳೆಯನ ಮದುವೆ ಮೆರವಣಿಗೆಯಲ್ಲಿ ಕುಣಿಯುತ್ತಿದ್ದ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪಗಡಲಬಂಡೆ ಗ್ರಾಮದಲ್ಲಿ ನಡೆದಿದೆ.
ಪಗಡಲಬಂಡೆ ಗ್ರಾಮದ ಆದರ್ಶ (25) ಮೃತ ಯುವಕ. ಈತ ಗೆಳೆಯನ ಮದುವೆ ಮೆರವಣಿಗೆ ವೇಳೆ ಡಿಜೆ ಸೌಂಡ್‌ಗೆ ಕುಣಿಯುತ್ತಿದ್ದ. ನೃತ್ಯದ ವೇಳೆ ಏಕಾಏಕಿ ಕುಸಿದು ಬಿದ್ದ ಯುವಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಆತನಿಗೆ ಹೃದಯಾಘಾತವಾಗಿರಬಹುದು ಎಂದು ಹೇಳಲಾಗಿದೆ. ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ