6 -10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್ಇ ಪಠ್ಯಕ್ರಮ: ಸಚಿವ ಮಧು ಬಂಗಾರಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ 6 ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್ಇ ಪಠ್ಯಕ್ರಮ ಅಳವಡಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು ಘೋಷಿಸಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಂ. ಎಲ್. ಅನಿಲ್ ಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಎಸ್ ಬಂಗಾರಪ್ಪ ಅವರು ಉತ್ತರಿಸಿದರು.

ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‌ಇ (CBSE) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ. ಆರ್‌ಟಿಇ ಕಾಯ್ದೆಯ ಅನುಷ್ಠಾನದಿಂದ ಈವರೆಗೆ 1 ರಿಂದ 8ನೇ ತರಗತಿಯವರೆಗೆ ಮಕ್ಕಳ ಶಾಲಾ ಪ್ರವೇಶ ಶುಲ್ಕವನ್ನು ಸರ್ಕಾರವೇ ಭರಿಸುತ್ತಿದೆ ಎಂದರು ತಿಳಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!