ಲೋಕಸಭೆಯಲ್ಲಿ ʼಒಂದು ದೇಶ ಒಂದು ಚುನಾವಣೆʼ ಮಸೂದೆ ಮಂಡನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಚುನಾವಣೆಯ ವೇಳೆ  ಪ್ರಣಾಳಿಕೆಯಲ್ಲಿ ಬಿಜೆಪಿ  ಘೋಷಣೆ ಮಾಡಿದಂತೆ ಬಹು ನಿರೀಕ್ಷೆಯ  ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅನುಮತಿ ನೀಡುವ ಒಂದು ದೇಶ, ಒಂದು ಚುನಾವಣೆ ಮಸೂದೆ ಇಂದು ಲೋಕಸಭೆಯಲ್ಲಿ  ಮಂಡನೆಯಾಗಿದೆ.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಲೋಕಸಭೆಯಲ್ಲಿ ಸಂವಿಧಾನ (ನೂರ ಇಪ್ಪತ್ತೊಂದನೇಯ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು ಮಸೂದೆಯನ್ನುಮಂಡಿಸಿದರು.

ಮಸೂದೆ ಮಂಡನೆಯ ಬೆನ್ನಲ್ಲೇ ಐಎನ್‌ಡಿಐಎ ಒಕ್ಕೂಟದ ಸದಸ್ಯರು ಭಾರೀ ವಿರೋಧ ವ್ಯಕ್ತಪಡಿಸಿದರು. ಸಂಸದ ಮನೀಶ್‌ ತಿವಾರಿ, ಕೇಂದ್ರ ಮತ್ತು ರಾಜ್ಯದ ಅವಧಿಯನ್ನು ಹೇಗೆ ಏಕ ಕಾಲದಲ್ಲಿ ಮಾಡಲು ಸಾಧ್ಯ? ಭಾರತ ಒಕ್ಕೂಟ ದೇಶ, ಕೇಂದ್ರೀಕರಣ ಮಾಡುವುದು ಸರಿಯಲ್ಲ. ಇದು ಸಂವಿಧಾನ ವಿರೋಧಿ ತಿದ್ದುಪಡಿ ಎಂದು ಕಿಡಿಕಾರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!