ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ 15 ಜನ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ವೇಗವಾಗಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.