ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಣಂತಿಯರ ಸಾವು ಕರ್ನಾಟಕವನ್ನೇ ಬೆಚ್ಚಿ ಬೀಳಿಸುವಂತಹ ಘಟನೆಯಾಗಿದೆ. ಇನ್ಮುಂದೆ ಸರ್ಕಾರಿ ಆಸ್ಪತ್ರೆಗೆ ಹೋಗಬಾರದವ್ವ ಅಂತ ಮಹಿಳೆಯರು ಮಾತಾಡ್ಕೊಳ್ತಿದ್ದಾರೆ. 50% ಮಹಿಳೆಯರು ಸರ್ಕಾರಿ ಆಸ್ಪತ್ರೆಗೆ ಹೋಗದೇ ಖಾಸಗಿ ಆಸ್ಪತ್ರೆಗೆ ಹೋಗ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದರು.
ಬಾಣಂತಿಯರ ಸಾವು ಪ್ರಕರಣ ಕರ್ನಾಟಕವನ್ನೇ ಬೆಚ್ಚಿ ಬೀಳಿಸುವ ಘಟನೆಯಾಗಿದೆ. ಬಳ್ಳಾರಿ ಮಾತ್ರವಲ್ಲ ರಾಯಚೂರು, ಬೆಳಗಾವಿ, ಚಿತ್ರದುರ್ಗದಲ್ಲೂ ಬಾಣಂತಿಯರ ಸಾವಾಗಿದೆ. ಆರೋಗ್ಯ ಇಲಾಖೆ ರೋಗ ಪೀಡಿತ ಇಲಾಖೆ ಆಗಿದೆ. ಘಟನೆ ಆದ 6 ದಿನದ ಬಳಿಕ ಸಚಿವರು ಜಿಲ್ಲೆಗೆ ಹೋಗಿದ್ದಾರೆ. ವೈದ್ಯರು ತಪ್ಪು ಒಪ್ಪಿಕೊಳ್ಳುತ್ತಿಲ್ಲ, ಡ್ರಗ್ ಕಂಟ್ರೋಲರ್ನನ್ನು ಬಲಿಪಶು ಮಾಡಲಾಗಿದೆ ಎಂದು ದೂರಿದರಲ್ಲದೇ ಒಂದೆಡೆ ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಜೋರಾಗಿದೆ ಎಂದು ಆರೋಪಿಸಿದ್ದಾರೆ.