ಜಗತ್ತಿನ ಮಹಾಮಾರಿ ಕ್ಯಾನ್ಸರ್‌ಗೂ ಬಂತು ವ್ಯಾಕ್ಸಿನ್​: ಮುಂದಿನ ವರ್ಷದಿಂದಲೇ ಎಲ್ಲಾ ನಾಗರಿಕರಿಗೂ ಫ್ರೀ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದ್ದು, ತನ್ನ ದೇಶದ ನಾಗರಿಕರಿಗೆ ಉಚಿತವಾಗಿ ಸಿಗಲಿದೆ ಎಂಬುದಾಗಿ ಹೇಳಿಕೊಂಡಿದೆ.

ಜಗತ್ತಿಗೆ ಮಹಾಮಾರಿಯಂತೆ ಕಾಡುತ್ತಿರುವ ಕ್ಯಾನ್ಸರ್ ಎಂಬ ಘಾತಕ ರೋಗಕ್ಕೆ ಸಂಪೂರ್ಣ ಗುಣಪಡಿಸುವ ಔಷಧಿ ಹಾಗೂ ಲಸಿಕೆಗಾಗಿ ಇಡೀ ವಿಶ್ವವೇ ನೂರಾರು ವರ್ಷಗಳಿಂದ ಸಂಶೋಧನೆ ನಡೆಸಿವೆ. ಇದೀಗ ಕೊನೆಗೂ ವ್ಯಾಕ್ಸಿನ್​ ಒಂದು ಬಂದಿದ್ದು ಕ್ಯಾನ್ಸರ್​ ರೋಗಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಕ್ಯಾನ್ಸರ್ ಲಸಿಕೆ ತಯಾರಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ನಿರ್ದೇಶಕ ಆಂಡ್ರೇ ಕಪ್ರಿನ್ ಮಾಹಿತಿ ನೀಡಿದ್ದಾರೆ.

ಮುಂದಿನ ವರ್ಷದಿಂದಲೇ ರಷ್ಯಾದ ನಾಗರಿಕರಿಗೆ ಈ ಕ್ಯಾನ್ಸರ್‌ ಲಸಿಕೆಯನ್ನು (Cancer Vaccine) ಉಚಿತವಾಗಿ ನೀಡಲಾಗುವುದು ಎಂದಿರುವ ಆಂಡ್ರೇ, ರಷ್ಯಾದ ಈ ಆವಿಷ್ಕಾರ ಶತಮಾನದ ಅತಿದೊಡ್ಡ ಆವಿಷ್ಕಾರವೆಂದು ಬಣ್ಣಿಸಿದ್ದಾರೆ. ಅಲ್ಲದೇ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ಇದು ಗೆಡ್ಡೆಯ ಬೆಳವಣಿಗೆಯನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ತೋರಿಸಿದೆ ಎಂದು ವಿವರಿಸಿದ್ದಾರೆ.

ಈ ವರ್ಷಾರಂಭದಲ್ಲೇ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಅವರು ಕ್ಯಾನ್ಸರ್‌ ಲಸಿಕೆ ತಯಾರಿಸಲು ರಷ್ಯಾ ಬಹಳ ಸಮೀಪದಲ್ಲಿದೆ ಎಂದು ಹೇಳಿದ್ದರು.

ಅದರಲ್ಲೂ ಭಾರತದ ಸ್ನೇಹಿ ರಾಷ್ಟ್ರ ಈ ಒಂದು ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದರಿಂದ ಭಾರತಕ್ಕೂ ಈ ವ್ಯಾಕ್ಸಿನ್ ಸುಲಭವಾಗಿ ದೊರೆಯಲಿದೆ. ಕಾರಣ ಕೋವಿಡ್ ಸಮಯದಲ್ಲಿ ರಷ್ಯಾ ಭಾರತಕ್ಕೆ ಸ್ಪುಟ್ನಿಕ್ ಲಸಿಕೆ ನೀಡುವ ಮೂಲಕ ಸಹಾಯ ನೀಡಿತ್ತು. ಇದೇ ಕಾರಣದಿಂದ ಈ ಒಂದು ಲಸಿಕೆ ಭಾರತಕ್ಕೆ ಅತಿಬೇಗ ಬಂದು ತಲುಪಲಿದೆ ಎಂದು ಹೇಳಲಾಗುತ್ತದೆ.

mRNA ಲಸಿಕೆ ಅಂದ್ರೆ ಏನು?
mRNA ಅಥವಾ ಮೆಸೆಂಜರ್‌ ಆರ್‌ಎನ್‌ಎ ಎಂಬುದು ಮಾನವನ ಆನುವಂಶಿಕ ಸಂಕೇತದ ಒಂದು ಸಣ್ಣ ಭಾಗವಾಗಿದೆ. ಇದು ನಮ್ಮ ಜೀವಕೋಶಗಳಲ್ಲಿ ಪ್ರೋಟೀನ್‌ಗಳನ್ನು ಉತ್ಪಾದಿಸುತ್ತದೆ. ವೈರಸ್‌ ಅಥವಾ ಬ್ಯಾಕ್ಟೀರಿಯಾವು ನಮ್ಮ ದೇಹವನ್ನು ಆಕ್ರಮಿಸಿದಾಗ, ಅದರ ವಿರುದ್ಧ ಹೋರಾಡಲು ಸಹಾಯಕವಾಗುವ ಪ್ರೋಟೀನ್‌ಗಳನ್ನು ಉತ್ಪಾದಿಸಲು mRNA ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಈ ಲಸಿಕೆಯಿಂದ ನಮ್ಮ ದೇಹದ ಪ್ರತಿರಕ್ಷಣಾ ವ್ಯವಸ್ಥೆಯು ಅಗತ್ಯವಾದ ಪ್ರೋಟೀನ್‌ಗಳನ್ನು ಪಡೆಯುತ್ತವೆ, ಪ್ರತಿಕಾಯ (ಆಂಟಿಬಾಡಿ) ರೂಪುಗೊಳ್ಳುತ್ತವೆ. ಇದರೊಂದಿಗೆ ರೋಗನಿರೋಧಕ ಶಕ್ತಿತಯೂ ಬಲಗೊಳ್ಳುತ್ತದೆ. ಕ್ಯಾನ್ಸರ್‌ ಲಸಿಕೆಯು mRNA ತಂತ್ರಜ್ಞಾನ ಆಧರಿಸಿದ ಮೊದಲ ಲಸಿಕೆಯಾಗಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!