ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯ ಸುವರ್ಣಸೌಧದಲ್ಲಿ ಕಲಾಪದ ವೇಳೆ ಇಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಅಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಸಿಟಿ ರವಿ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಇದಾದ ಬಳಿಕ ಸುವರ್ಣ ಸೌಧದಿಂದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಈ ಕುರಿದಂತೆ ನಾನು ನಾಳೆ ಮಾತನಾಡುತ್ತೇನೆ ಎಂದು ಕಣ್ಣೀರು ಹಾಕುತ್ತಲೇ ಭಾವುಕರಾಗಿ ಉತ್ತರಿಸಿದರು.