ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ರೆ ನಾನು ಡಿಫೆಂಡ್‌ ಮಾಡಲ್ಲ: ಎಚ್‌ಡಿಕೆ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಳಗಾವಿಯ ಸುವರ್ಣಸೌಧದಲ್ಲಿಯೇ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರ ಮೇಲೆ ನಡೆದಿರುವ ಹಲ್ಲೆ ಯತ್ನವನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಕೇಂದ್ರ ಸಚಿವರು, ಸಚಿವೆ ಬಗ್ಗೆ ಸಿ.ಟಿ.ರವಿ ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಹ ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು ಎಂದು ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಅಂದ್ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಅವರ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here