ಭಾರತೀಯ ರಾಯಭಾರಿಗೆ ಪನ್ನುನ್ ಬೆದರಿಕೆ: ಭಾರತ ವಿದೇಶಾಂಗ ಸಚಿವಾಲಯ ಖಂಡನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಅಮೆರಿಕದಲ್ಲಿನ ಭಾರತೀಯ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ ವಿರುದ್ಧ ಭಯೋತ್ಪಾದಕ ಗುರುಪತ್‌ವಂತ್ ಸಿಂಗ್ ನೀಡಿರುವ ಬೆದರಿಕೆಗಳನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಇಂದು ಮಾಧ್ಯಮಗೋಷ್ಠಿ ನಡೆಸಿದ್ದಾರೆ.

ವಿನಯ್ ಮೋಹನ್ ಕ್ವಾತ್ರಾ ಅವರು ಬೆದರಿಕೆಗಳನ್ನು ಭಾರತವು ಗಂಭೀರವಾಗಿ ಪರಿಗಣಿಸುತ್ತದೆ. ಅದನ್ನು ಯುಎಸ್ ಸರ್ಕಾರದೊಂದಿಗೆ ಪ್ರಸ್ತಾಪಿಸಿದೆ . ಅಮೆರಿಕ ಸರ್ಕಾರ ನಮ್ಮ ಕಳವಳಗಳನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಭಾರತ ನಿರೀಕ್ಷಿಸುತ್ತದೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ, ಪನ್ನುನ್ ಭಾರತೀಯ ರಾಯಭಾರಿ ಕ್ವಾತ್ರಾ ವಿರುದ್ಧ ಬೆದರಿಕೆ ಹಾಕಿದ್ದರು. ಅವರು ಅಮೆರಿಕದಲ್ಲಿ ಖಲಿಸ್ತಾನ್ ಪರ ಸಿಖ್ಖರ ರಾಡಾರ್‌ನಲ್ಲಿದ್ದಾರೆ ಎಂದು ಹೇಳಿದ್ದಾರೆ. ಉತ್ತರ ಅಮೆರಿಕಾದಲ್ಲಿ ಖಲಿಸ್ತಾನಿ ಚಟುವಟಿಕೆಗಳನ್ನು ಎದುರಿಸಲು ರಷ್ಯಾದ ರಾಜತಾಂತ್ರಿಕರೊಂದಿಗೆ ಸಮನ್ವಯ ಸಾಧಿಸುವಲ್ಲಿ ಕ್ವಾತ್ರಾ ತೊಡಗಿಸಿಕೊಂಡಿದ್ದಾರೆ ಎಂದು ಪನ್ನುನ್ ಆರೋಪಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!