ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಎಫ್ಐಆರ್ ಅನ್ನು ದೆಹಲಿ ಪೊಲೀಸರು ಅಪರಾಧ ವಿಭಾಗಕ್ಕೆ ವರ್ಗಾಯಿಸಿದ್ದಾರೆ.
ಸಂಸತ್ ಹೊರಗಡೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಘರ್ಷಣೆಯಲ್ಲಿ ಇಬ್ಬರು ಬಿಜೆಪಿ ಸಂಸದರಾದ ಪ್ರತಾಪ್ ಚಂದ್ರ ಸಾರಂಗಿ ಮತ್ತು ಮುಖೇಶ್ ರಜಪೂತ್ ಅವರ ತಲೆಗೆ ಗಾಯಗಳಾಗಿದ್ದು, ತಮ್ಮ ಸಂಸದರೊಬ್ಬರನ್ನ ತಳ್ಳುವ ಮೂಲಕ ರಾಹುಲ್ ಗಾಂಧಿ ದೈಹಿಕ ಹಲ್ಲೆ ಮತ್ತು ಪ್ರಚೋದನೆ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ಸಂಸದರಾದ ಹೇಮಂಗ್ ಜೋಶಿ, ಅನುರಾಗ್ ಠಾಕೂರ್ ಮತ್ತು ಬಾನ್ಸುರಿ ಸ್ವರಾಜ್ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.
ಈ ಕೇಸ್ ಅನ್ನು ದೆಹಲಿ ಪೊಲೀಸರು ಅಪರಾಧ ವಿಭಾಗಕ್ಕೆ ವರ್ಗಾಯಿಸಿದ್ದಾರೆ.