ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ಟ್ರಕ್ ವೊಂದು ಹರಿದ ಪರಿಣ್ಮ ಇಬ್ಬರು ಮಕ್ಕಳು ಸೇರಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆ ನಗರದಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ.
ಮೃತರನ್ನು ವೈಭವಿ ಪವಾರ್ (1), ವೈಭವ್ ಪವಾರ್ (2) ಮತ್ತು ವಿಶಾಲ್ ಪವಾರ್ (22) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸಸೂನ್ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಕೊಡಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಘೋಲಿ ಪ್ರದೇಶದ ಫುಟ್‌ಪಾತ್‌ನಲ್ಲಿ ಮಧ್ಯರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಘಟನೆಯ ನಂತರ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇಶ್ನಂದ್ ಫಾಟಾ ಪ್ರದೇಶದ ಬಳಿಯ ಫುಟ್‌ಪಾತ್‌ನಲ್ಲಿ ಹಲವರು ಮಲಗಿದ್ದರು, ಬಹುತೇಕ ಮಂದಿ ದಿನಗೂಲಿ ಕಾರ್ಮಿಕರಾಗಿದ್ದಾರೆಂದು ತಿಳಿದುಬಂದಿದೆ. ಚಾಲಕನನ್ನು ಬಂಧಿಸಲಾಗಿದೆ. ಘಟನೆ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.