ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಹಾಗೂ ಒಲಿಂಪಿಕ್ಸ್ ಪದಕ ವಿಜೇತೆ ಪಿವಿ ಸಿಂಧು ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ (Udaipur) ಅದ್ದೂರಿಯಾಗಿ ನಡೆದ ಮದುವೆ ಸಮಾರಂಭದಲ್ಲಿ ಉದ್ಯಮಿ ವೆಂಕಟ್ ದತ್ತಾ ಸಾಯಿ ಅವರೊಂದಿಗೆ ಸಿಂಧು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಈ ನವ ಜೋಡಿಗೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ.
ಡಿಸೆಂಬರ್ 22 ರಂದೇ ಸಿಂಧು ಮತ್ತು ವೆಂಕಟ್ ಮದುವೆಯಾಗಿದ್ದಾರೆ. ಅವರ ವಿವಾಹ ಸಮಾರಂಭವನ್ನು ಖಾಸಗಿಯಾಗಿ ಇರಿಸಲಾಗಿರುವುದರಿಂದ ಸಿಂಧು ತಮ್ಮ ಮದುವೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಇನ್ನೂ ಹಂಚಿಕೊಳ್ಳಲಾಗಿಲ್ಲ. ಈ ಮದುವೆಯಲ್ಲಿ ಭಾಗಿಯಾಗಿರುವ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನವ ಜೋಡಿಯ ಮದುವೆಯ ಫೋಟೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು ನವದಂಪತಿಗಳಿಗೆ ಶುಭಕೋರಿದ್ದಾರೆ. ಈ ಫೋಟೋ ಈಗ ವೈರಲ್ ಆಗಿದೆ.
ಡಿ.14ರಂದು ಇಬ್ಬರ ನಿಶ್ಚಿತಾರ್ಥ ನಡೆದಿತ್ತು. ಇದೀಗ ಆತ್ಮೀಯರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿರುವ ಈ ಜೋಡಿ ಮಂಗಳವಾರ ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ಆರತಕ್ಷತೆಯನ್ನು ಏರ್ಪಡಿಸಿದೆ.