ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಷ್ಠಿತ ರಾಮನಗರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಚುನಾವಣೆ ಹಿನ್ನೆಲೆ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಕೆ.ಶೇಷಾದ್ರಿ ಅವಿರೋಧ ಆಯ್ಕೆಯಾಗಿದ್ದಾರೆ.
ಒಟ್ಟು 31 ಸದಸ್ಯರ ಸಂಖ್ಯಾಬಲವಿರುವ ರಾಮನಗರ ನಗರಸಭೆಯಲ್ಲಿ ಕಾಂಗ್ರೆಸ್‌ನ 20 ಸದಸ್ಯರು ಹಾಗೂ ಜೆಡಿಎಸ್‌ನ 11 ಸದಸ್ಯರಿದ್ದಾರೆ. ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಇರುವ ಹಿನ್ನೆಲೆ ಅಧ್ಯಕ್ಷರಾಗಿ ಕೆ.ಶೇಷಾದ್ರಿ, ಉಪಾಧ್ಯಕ್ಷರಾಗಿ ಆಯಿಷಾ ಬಾನು ಅವಿರೋಧ ಆಯ್ಕೆಯಾಗಿದ್ದಾರೆ.