ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಯಾರಿಸ್ನ ಐಕಾನಿಕ್ ಲ್ಯಾಂಡ್ ಮಾರ್ಕ್ ಐಫೆಲ್ ಟವರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 1,200 ಪ್ರವಾಸಿಗರನ್ನು ಸ್ಥಳಾಂತರಿಸಲಾಗಿದೆ.
ಕ್ರಿಸ್ಮಸ್ ಮುನ್ನಾದಿನ ಘಟನೆ ನಡೆದಿದೆ. ಪ್ಯಾರಿಸ್ನ ಐಫೆಲ್ ಟವರ್ನ ಮೊದಲ ಮತ್ತು ಎರಡನೇ ಮಹಡಿಗಳ ನಡುವೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಕೂಡಲೇ ಪ್ರವಾಸಿಗರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.
ಬೆಂಕಿಯನ್ನು ನಿಯಂತ್ರಿಸಲು ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತುರ್ತು ಸೇವೆಗಳ ಸಿಬ್ಬಂದಿ ನಿಯೋಜಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.