ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಂಡರ್ ಸ್ಫೋಟದಿಂದ ಮೃತಪಟ್ಟ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಕುಟುಂಬದವರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.
ಮೃತ ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಗುರುವಾರ ಘೋಷಣೆ ಮಾಡಿದ್ದಾರೆ.
ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳು ಸಹ ಸಾಂತ್ವನ ಹೇಳಿದ್ದಾರೆ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ ಎಂದು ಲಾಡ್ ತಿಳಿಸಿದರು.
ಘಟನೆಯಲ್ಲಿ ಗಾಯಗೊಂಡಿರುವ ಇತರ 7 ಮಂದಿ ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಓರ್ವ ಬಾಲಕನ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಕುಟುಂಬದವರ ಜತೆ ಚರ್ಚಿಸಿ ಇನ್ನು ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತದೆ ಎಂದು ಕಿಮ್ಸ್ ಆಸ್ಪತ್ರೆ ಬಳಿ ಸಚಿವ ಸಂತೋಷ್ ಲಾಡ್ ತಿಳಿಸಿದರು.