ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದರಿಂದ, ಶುಕ್ರವಾರ ನಡೆಯಬೇಕಿದ್ದ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯದ ಎಂಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಿದೆ. ಮುಂದಿನ ಪರೀಕ್ಷಾ ದಿನಾಂಕ ವಿಶ್ವವಿದ್ಯಾಲಯದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತೆ ಎಂದು ಬೆಂಗಳೂರು ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವರು ಮಾಹಿತಿ ನೀಡಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಎಲ್ಲ ಪರೀಕ್ಷೆಗಳು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮೈಸೂರು ವಿಶ್ವ ವಿದ್ಯಾಲಯ ಕುಲಸಚಿವ ಎನ್.ನಾಗರಾಜ್ ಮಾಹಿತಿ ನೀಡಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ, ಕಾಲೇಜುಗಳು ರಜೆ ಇರಲಿದೆ. ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ.